ಚಂದ್ರವಳ್ಳಿ ನ್ಯೂಸ್, ತುಮಕೂರು:
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ ೨೭ರೊಳಗಾಗಿ
ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.