ಸಹಕಾರ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ತರಬೇತಿಯು ಜುಲೈ 1 ರಿಂದ ಪ್ರಾರಂಭವಾಗಲಿದೆ.

- Advertisement - 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ತುಮಕೂರು, ಚಿಕ್ಕಬಳ್ಳಾಪುರ ಹಾಗೂ  ಕೋಲಾರ ಜಿಲ್ಲೆಗಳಿಗೆ ಸೇರಿರುವ ಪಿಯುಸಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

- Advertisement - 

ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ 500 ರೂ.ಗಳ ಶಿಷ್ಯ ವೇತನ ನೀಡಲಾಗುವುದು. ಈ ತರಬೇತಿಯು ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಪೂರಕವಾಗಲಿದೆ. ಸಹಕಾರ ಸಂಸ್ಥೆಗಳ ನೇಮಕಾತಿಗಳಲ್ಲಿ ಆದ್ಯತೆ ದೊರೆಯಲಿದೆ.

ಆಸಕ್ತ ಅಭ್ಯರ್ಥಿಗಳು ಕೆಐಸಿಎಂ ನಂ 1/3, 2 ನೇ ಮಹಡಿ, 3 ನೇ ಮುಖ್ಯ ರಸ್ತೆ, ಚಾಮರಾಜಪೇಟೆ ಬೆಂಗಳೂರು -18 ಈ ವಿಳಾಸಕ್ಕೆ  ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-355414407, 9449007661, 8105681745 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

Share This Article
error: Content is protected !!
";