ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ 1ನೇ ಜನವರಿ 2024 ರಿಂದ 31ನೇ ಡಿಸೆಂಬರ್ 2024 ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರವಿಮರ್ಶೆಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.

ನಾಲ್ಕು ಪ್ರಕಾರಗಳ ಲೇಖಕರು/ ಪ್ರಕಾಶಕರು/ ಸಂಪಾದಕರು ತಮ್ಮ ಒಂದು ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು560002 ಇವರಿಗೆ 20ನೇ ಮೇ 2025 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ.

  ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು  ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.

ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು / ಲೇಖಕರು ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಮತ್ತೊಮ್ಮ ಕಳುಹಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

Share This Article
error: Content is protected !!
";