ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ ಗಳ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯ ವೆಬ್ಸೈಟ್ ಆದ https://swd.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಜಾತಿ ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣಪತ್ರ/ಅಂಕಪಟ್ಟಿ ಹೊಂದಿರಬೇಕು.
ವೆಬ್ಸೈಟ್ ಲಿ ಆಧಾರ್ ಸೀಡ್ ಆಗಿರುವ ಹಾಗೂ ಆಧಾರ್ ಸೀಡ್ ಆಗದೆ ಇರುವ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು ,ಆಧಾರ್ ಸೀಡ್ ಆಗಿರುವ ಮತ್ತು ಪಟ್ಟಿಯಲ್ಲಿರುವ ವಿದ್ಯಾರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಹಾಗೂ ಆಧಾರ್ ಸೀಡ್ ಆಗದೆ ಇರುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸೀಡ್ ಮಾಡಿಸಿ ಡಿಸೆಂಬರ್ 2025 ರ ಒಳಗಾಗಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿದ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 217, 2ನೇ ಮಹಡಿ, ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿಗೆ ದೃಢೀಕೃತ ದಾಖಲೆಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ,ದೂರವಾಣಿ ಸಂಖ್ಯೆ 080-29787447. ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು, 080-7681784. ದೊಡ್ಡಬಳ್ಳಾಪುರ 080-7623681. ಹೊಸಕೋಟೆ 080-7931528. ನೆಲಮಂಗಲ 080-7723172 ಸಂಪರ್ಕಿಸಬಹುದು ಎಂದು ಸಮಾಜ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.