Ad imageAd image

“ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನಗಳ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024 ನೇ  ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪøಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ನಾಮನಿರ್ದೇಶನಗಳನ್ನು ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 19 ರ  ಸಂಜೆ 5.30 ರೊಳಗಾಗಿ ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ-ಮೇಲ್ : [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ.

 

- Advertisement -  - Advertisement - 
Share This Article
error: Content is protected !!
";