ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲ್ಲೂಕಿನ ಪ್ರತಿಭಾವಂತ ಕುರುಬ ಸಮುದಾಯದ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ
2024-25ನೇ ಸಾಲಿನಲ್ಲಿ ಶೇ.85ಕ್ಕಿಂತ ಅತಿ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಚಿತ್ರದುರ್ಗ ತಾಲ್ಲೂಕಿನ ಕುರುಬ ಸಮಾಜದ ವಿದ್ಯಾರ್ಥಿಗಳು ಇದೇ ಜೂನ್ 10ರೊಳಗಾಗಿ ತಮ್ಮ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಕೋರಿದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ9844412448 ಹಾಗೂ ಕಾರ್ಯದರ್ಶಿ ಹನಮಂತಗೌಡ ಪೂಜಾರ9448339025 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

- Advertisement - 

 

Share This Article
error: Content is protected !!
";