ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2025ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ.28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರವೇಶ ಪಡೆಯಲು 2025 ಆಗಸ್ಟ್ 01ರಂದು 14 ವರ್ಷ ಮೇಲ್ಪಟ್ಟ ವಯೋಮಿತಿಯು ಕಡ್ಡಾಯವಾಗಿರುತ್ತದೆ.

ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಬಯಸುವ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಮತ್ತು ಅರ್ಹ ಆಸಕ್ತ ಅಭ್ಯರ್ಥಿಗಳು www.cite.karnataka.gov.in  ತಂತ್ರಾಂಶದ ಮೂಲಕ ಅಥವಾ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿರುವ ಹೆಲ್ಪ್ ಡೆಸ್ಕ್ ಮುಖಾಂತರ ಆನ್ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಂಸ್ಥೆಯ ಮಹಿಳಾ ಸಂಸ್ಥೆಯಾಗಿರುವುದರಿಂದ ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯಾಗಿರುತ್ತದೆ.

ಸಂಸ್ಥೆಯಲ್ಲಿ ಲಭ್ಯವಿರುವ ವೃತ್ತಿಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಯನ್ನು ಸಂಪರ್ಕಿಸಬಹುದು ಎಂದು  ಪ್ರಾಚಾರ್ಯ ಬಿ.ಸುರೇಶ್ ತಿಳಿಸಿದ್ದಾರೆ.

Share This Article
error: Content is protected !!
";