ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2024 ರ ಜನವರಿ 01 ರಿಂದ 2024 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2024 ಎಂದು ಮುದ್ರಿತವಾಗಿರಬೇಕು.
ಲೇಖಕರು/ ಪ್ರಕಾಶಕರು/ ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು–560002 ಈ ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ ಅಥವಾ ಕೊರಿಯರ್ ಮೂಲಕಥವಾ ಖುದ್ದಾಗಿ 2025ರ ಜುಲೈ 15 ರೊಳಗೆ ತಲುಪುವಂತೆ ಕಳುಹಿಸಬೇಕು. ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ಯಾವ ಪ್ರಕಾರಗಳಲ್ಲಿ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‍ಸೈಟ್ www.sahithyaacademy.karnataka.gov.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.