ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಮಲಾಪುರ ಪ್ರಾದೇಶಿಕ ಕೇಂದ್ರದಿಂದ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಸ್ಥಳದಲ್ಲಿಯೇ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿಜಯನಗರ ಜಿಲ್ಲೆಯ ಪ್ರಾದೇಶಿಕ ನಿರ್ದೇಶಕ ಪ್ರಶಾಂತ್.ಎಂ ತಿಳಿಸಿದ್ದಾರೆ.

ಸಾಂಪ್ರದಾಯಿಕವಾಗಿ ಕಾಲೇಜಿಗೆ ತೆರಳದೇ ಮನೆಯಲ್ಲೇ ಕುಳಿತು, ಸರಕಾರಿ, ಅರೆಸರಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ದೂರಶಿಕ್ಷಣ ವ್ಯವಸ್ಥೆಯಡಿ ಶಿಕ್ಷಣ ಪಡೆಯಲು ಈ ಭಾಗದ ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರಿಗೆ ಅನುಕೂಲವಾಗುವ ದೃಷ್ಟಿಯಿಂದ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನದೇ ಆದ ಪ್ರಾದೇಶಿಕ ಕೇಂದ್ರವನ್ನು ನೂತನವಾಗಿ ಹೊಸಪೇಟೆಯ ಕಮಲಾಪುರದಲ್ಲಿ ಪ್ರಾರಂಭಿಸಿರುತ್ತದೆ.

ಪ್ರಥಮ ಬಿಎ, ಬಿಕಾಂ, ಬಿಎಸ್ಸಿ, ಬಿಲಿಬ್,ಐಎಸ್ಸಿ, ಬಿಸಿಎ, ಬಿಬಿಎ ಮತ್ತು ಬಿಎಸ್‌ಡಬ್ಲೂ ಹಾಗೂ ಎಂಎ ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ತೆಲುಗು, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಸಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಶಿಕ್ಷಣಶಾಸ್ತ್ರ, ಎಂಎ-ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂಕಾಂ, ವಿವಿಧ ಎಂ.ಎಸ್ಸಿ ರಸಾಯನಶಾಸ್ತ್ರ, ಜೀವಶಾಸ್ತ್ರ, ಮಾನವಶಾಸ್ತ್ರ, ಸಸ್ಯಶಾಸ್ತ್ರ ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ವೈದ್ಯಕೀಯ ಪೋಷಣೆ ಮತ್ತು ಆಹಾರ ಪದ್ಧತಿ, ಆಹಾರ ಮತ್ತು ಪೋಷಣೆ, ಜೀವರಸಾಯನಶಾಸ್ತ್ರ, ಭೂಗೋಳಶಾಸ್ತ್ರ, ಮಾಹಿತಿ ತಂತ್ರಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಪದವಿ ಶಿಕ್ಷಣ ಕ್ರಮಗಳಿಗೆ ವಿವಿಯ ನಿಯಮಗಳಿಗನುಗುಣವಾಗಿ ಸ್ಥಳದಲ್ಲಿಯೇ ದಾಖಲಾತಿ ಪಡೆದು ಪ್ರವೇಶ ನೀಡಲಾಗುವುದು.

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಹಾಕಿಕೊಂಡು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಹೊಸಪೇಟೆಯಲ್ಲಿ ಕಮಲಾಪುರದ ಪ್ರಾದೇಶಿಕ ಕೇಂದ್ರ ಕಚೇರಿಗೆ ಭೇಟಿ ನೀಡಿ, ನಿಗದಿತ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ, ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ಸಲ್ಲಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಪ್ರವೇಶಕ್ಕೆ ಮಾ.31 ರಂದು ಕೊನೆ ದಿನ, ವಿದ್ಯಾರ್ಥಿಗಳು ಮತ್ತು ಪೋಷಕರು ಸದುಪಯೋಗ ಪಡೆದುಕೊಳ್ಳಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9945171920, 8310786885, 7353482254, 8088681698 ಕರೆ ಮಾಡಬಹುದು. ವಿವಿ ಅಂತರ್ಜಾಲ ವಿಳಾಸ : www.ksoumysuru.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";