ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮೊ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಮಾತ್ರ,
ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ http://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಜೂನ್ 28 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡುವಂತೆ ಅಲ್ಪಸಂಖ್ಯಾತರ ಜಿಲ್ಲಾಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.