ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲಲಿತಕಲಾ ಅಕಾಡೆಮಿಯ ವತಿಯಿಂದ ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಚಿತ್ರಕಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಒಂದು ಬಾರಿ ಮಾತ್ರ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ವಿದ್ಯಾಲಯಗಳಲ್ಲಿ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಬಿ.ಎಫ್.ಎ/ಎಂ.ಎಫ್.ಎ ವ್ಯಾಸಾಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

- Advertisement - 

ಅರ್ಜಿದಾರರು ಕರ್ನಾಟಕದವರಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರ ಹಾಗೂ 5×6 ಅಳತೆಯ ಎರಡು ಚಿತ್ರಕಲಾಕೃತಿಗಳ ಛಾಯಾಚಿತ್ರಗಳು ಸೇರಿದಂತೆ ಈ ಹಿಂದೆ ವಿದ್ಯಾರ್ಥಿ ವೇತನ ಪಡೆದಿಲ್ಲವೆಂದು ಸಂಬಂಧಪಟ್ಟ ಕಲಾ ವಿದ್ಯಾಲಯದ ಮುಖ್ಯಸ್ಥರು/ಪ್ರಾಚಾರರ್ಯರ ದೃಢೀಕರಣದೊಂದಿಗೆ 2025ನೇ ಸೆಪ್ಟಂಬರ್ 15 ರ ಒಳಗಾಗಿ ಅಕಾಡೆಮಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಾಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ತಲುಪಿಸಲು ಕೋರಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಪರಿಗಣಿಡಲಾಗುವುದಿಲ್ಲ.

- Advertisement - 

ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್ https://lalitkala.karnataka.gov.in ಇಮೇಲ್ [email protected]  ಹಾಗೂ ದೂರವಾಣಿ ಸಂಖ್ಯೆ 080-2248027 ಸಂಪರ್ಕಿಸಬಹುದೆಂದು ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಬಿ. ನೀಲಮ್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";