ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಗಳ ದೂರ ಶಿಕ್ಷಣ ಕ್ರಮದ ಮೂಲಕ ಪದವಿ, ಸ್ನಾತಕೋತ್ತರ ಪದವಿ, ಪಿ.ಹೆಚ್.ಡಿ ಶಿಕ್ಷಣ ಪಡೆಯುತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವೆಬ್ ಸೈಟ್  www.sw.kar.nic.in     ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು ಆಧಾರ್, ಮೊಬೈಲ್, ಇ ಮೇಲ್ ಐಡಿ,

- Advertisement - 

ವಿಕಲ ಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಹಾಗೂ ಎಸ್.ಎಸ್.ಎಲ್.ಸಿ ನೊಂದಣಿ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮನೆ ವಿಳಾಸ, ಕಾಲೇಜು ನೊಂದಣಿ ದಾಖಲಾತಿ ಹಾಗೂ ಇ-ದೃಢೀಕರಣ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

 

- Advertisement - 

 

 

Share This Article
error: Content is protected !!
";