ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಪದವಿ ವ್ಯಾಸಾಂಗ ಮಾಡುತ್ತಿರುವ

- Advertisement - 

ಪ್ರವರ್ಗ1, 2,2ಬಿ,3,3ಬಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವರ್ಗ-1, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ಆದಾಯ ಮಿತಿ ನಿಗದಿ ಪಡಿಸಲಾಗಿದೆ.

- Advertisement - 

ಆಸಕ್ತ ವಿದ್ಯಾರ್ಥಿಗಳು https://shpkarnataka.gov.in/bcwd     ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಆಗಸ್ಟ್ 14ರ ಒಳಗೆ ಅರ್ಜಿ ಸಲ್ಲಿಸಬೇಕು. ಖಾಲಿ ಸ್ಥಾನಗಳು, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ವಿವಿರ, ಸರ್ಕಾರ ಆದೇಶ ವೀಕ್ಷಣೆಗೆ ವೆಬ್‌ಸೈಟ್  https://bcwdkarnataka.gov.in     ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ವೇಳೆಯಲ್ಲಿ ತಾಂತ್ರಿಕ ದೋಷ ಕಂಡುಬAದರೆ bcwdhelpline@gmail.com     ಮೇಲ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005ಗೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

 

Share This Article
error: Content is protected !!
";