ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್ ಪ್ರವೇಶಾತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಬಿ.ಎಡ್. ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಯನ್ನು ಮಾಡಲಾಗುತ್ತದೆ. 

ಅಭ್ಯರ್ಥಿಗಳು ವಿಜ್ಞಾನ/ಸಮಾಜ ವಿಜ್ಞಾನ/ವಾಣಿಜ್ಯ/ಮಾನವೀಯತೆ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಪಡೆದ ಅಭ್ಯರ್ಥಿಗಳು, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ವಿಶೇಷತೆಯೊಂದಿಗೆ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಶೇಕಡ 55% ಅಂಕಗಳೊಂದಿಗೆ ಪದವಿ ಪಡೆದಿರಬೇಕು.

- Advertisement - 

ಪದವಿ ಜೊತೆಗೆ ಹೆಚ್ಚುವರಿಯಾಗಿ, ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ತರಬೇತಿ ಪಡೆದ ಸೇವಾ ಶಿಕ್ಷಕರು. ಎನ್‍ಸಿಟಿಇ ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮವನ್ನು ಮುಖಾಮುಖಿ ವಿಧಾನದ ಮೂಲಕ ಪೂರ್ಣಗೊಳಿಸಿದ ಅಭ್ಯರ್ಥಿಗಳು. (ಮಾನ್ಯತೆ ಪಡೆದ ಶಿಕ್ಷಕರ ಶಿಕ್ಷಣ ಕಾರ್ಯಕ್ರಮ ಎಂದರೆ TCH/D.Ed./D.El.Ed./B.El.Ed.//ತತ್ಸಮಾನ). ದೂರಶಿಕ್ಷಣದಲ್ಲಿ ಬಿ.ಎಡ್. ಪ್ರವೇಶಾತಿ ಪಡೆಯಲು ಅರ್ಹತೆ ಹೊಂದಿರುತ್ತಾರೆ.

ಈ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಬಿ.ಎಡ್. ಸಾಮಾನ್ಯ ಪರೀಕ್ಷೆಯನ್ನು ಬರೆಯಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನಾಂಕವಾಗಿರುತ್ತದೆ. ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯು ಸೆÀಪ್ಟೆಂಬರ್ 28 ರಂದು ನಿಗದಿ ಆಗಿರುತ್ತದೆ.

- Advertisement - 

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98806-26439/90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";