ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡೈರೆಕ್ಟರ್ ಜನರಲ್ (ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ) ಇವರು ಹೆಚ್ಚಿನ ಸಂಖ್ಯೆಯ ಮಾಜಿ ಸೈನಿಕರನ್ನು ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್)ಗೆ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಆನ್‍ಲೈನ್ ಪೋರ್ಟಲ್ (www.civildefencewarriors.gov.in) ಮತ್ತು ಮೊಬೈಲ್ ಆ್ಯಪ್‍ನ್ನು (CD warriors) ತೆರೆದಿದ್ದು, ಆಸಕ್ತ ಮಾಜಿ ಸೈನಿಕರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕೋರಿರುತ್ತಾರೆ.
ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್)ಗೆ ಸ್ವಯಂ ಸೇವಕರಾಗಿ ಸೇರ ಬಯಸುವ ಮಾಜಿ ಸೈನಿಕರು ಹೆಚ್ಚಿನ ಮಾಹಿತಿಗಾಗಿ ADG, Civil Defence, Sh. Umesh Sharma, Office No-011-20863645 ಮತ್ತು ಇಮೇಲ್ adacom.dgfs-cdhg@gov.in ಇವರನ್ನು ಸಂಪರ್ಕಿಸಬಹುದಾಗಿದೆ.
ನೋಂದಾಯಿಸಿಕೊಂಡ ಮಾಜಿ ಸೈನಿಕರು ಆದಷ್ಟು ಶೀಘ್ರವಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಛೇರಿಯಲ್ಲಿ ತಮ್ಮ ಹೆಸರನ್ನು ದಾಖಲಿಸಬೇಕು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.