ಪ್ರಥಮ ವರ್ಷದ ಪದವಿ ಕೋರ್ಸುಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೊಪ್ಪಳ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.., ಬಿ.ಕಾಂ., ಬಿ.ಕಾಂ (ಎಇಡಿಪಿ), ಬಿ.ಎಸ್ಸಿ, ಬಿ.ಬಿ.. ಮತ್ತು ಬಿ.ಸಿ.. ಕೋರ್ಸುಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಯುಯುಸಿಎಂಎಸ್  https://uucms.karnataka.gov.in/  ತಂತ್ರಾಂಶದ ಮುಖಾಂತರ 2025 ರ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡು ನಿಗದಿತ ದಿನಾಂಕದ ಒಳಗೆ ಪ್ರವೇಶಾತಿಯನ್ನು ಪಡೆದುಕೊಳ್ಳಬೇಕು.

ಹೆಚ್ಚಿನ ವಿವರಗಳಿಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಜಾಲತಾಣ www.koppaluniversity.ac.in ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಪ್ರಭಾರ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";