ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿ, ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್ ಜೆರಾಕ್ಸ್ ಹಾಗೂ ವಿದ್ಯಾರ್ಥಿಯ ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಬೇಕು.

ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ ಸಂಘದ ದೃಢೀಕರಣದೊಂದಿಗೆ 17-5-2025 ರೊಳಗಾಗಿ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆಜಿ ರಸ್ತೆ, ಬೆಂಗಳೂರು-09 ಇಲ್ಲಿಗೆ ತಲಪುವಂತೆ ಕಳುಹಿಸಬೇಕು.

ಅರ್ಜಿ ಮತ್ತು ಇತರೆ ಮಾಹಿತಿಗಾಗಿ ಆಯಾ ಜಿಲ್ಲಾ ಸಂಘವನ್ನು ಸಂಪರ್ಕಿಸಿ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.

 

 

Share This Article
error: Content is protected !!
";