ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೀದರ ಜಿಲ್ಲೆಯಲ್ಲಿ ಮುಂಬರುವ ಮಾರ್ಚ್ 28 ಮತ್ತು 29ರಂದು ಹಮ್ಮಿಕೊಳ್ಳಲಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಪ್ರಚಾರ ಮತ್ತು ಮಾಹಿತಿ ವಿನಿಮಯಕ್ಕಾಗಿ ಸಿದ್ಧಪಡಿಸಿರುವ ವೆಬ್ಸೈಟ್ ಲೋಕಾರ್ಪಣೆಗೆ ಇದೇ ಫೆ.23ರಂದು ಬೀದರ ನಗರಕ್ಕೆ ಆಗಮಿಸುವಂತೆ ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾದ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ಭೇಟಿಯಾಗಿ ಆಹ್ವಾನಿಸಲಾಯಿತು.
ಸಮ್ಮೇಳನದ ಸಿದ್ಧತೆಗಳ ಪರಿಶೀಲನೆ :
ಆಹ್ವಾನ ನೀಡುವ ಸಂದರ್ಭದಲ್ಲಿ ಕೆ.ವಿ. ಪ್ರಭಾಕರ್ ಅವರು ಸಮ್ಮೇಳನದ ಸಿದ್ಧತೆಗಳ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ, ಸಮಿತಿ ಸದಸ್ಯರಾದ ಅಪ್ಪಾರಾವ್ ಸೌದಿ, ಶಿವಕುಮಾರಸ್ವಾಮಿ ಹಾಗೂ ಬೀದರ್‌ನ ಹಿರಿಯ ಪತ್ರಕರ್ತರಾದ ಪೃಥ್ವಿರಾಜ್ ಮತ್ತು ನಂದಕುಮಾರ ಕರಂಜಿ ಉಪಸ್ಥಿತರಿದ್ದರು.

