ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿಗೆ ಕೈಗಾರಿಕಾ ತರಬೇತಿ ಸಂಸ್ಥೆ ಪ್ರವೇಶಾತಿಗೆ ಸೇರ ಬಯಸುವವರಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಮೇ.28 ಕೊನೆಯ ದಿನವಾಗಿದೆ.
ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಕಂಪ್ಯೂಟರ್ ಕೇಂದ್ರಗಳಲ್ಲಿ www.cite.karnataka.gov.in ವೆಬ್ಸೈಟ್ ಮುಖಾಂತರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ಸಂಸ್ಥೆ ಎನ್.ಹೆಚ್–4, ಹಿರಿಯೂರು ಇಲ್ಲಿ ಖುದ್ದಾಗಿ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ 9844425259, 9900545700 ಸಂಪರ್ಕಿಸಬಹುದು ಎಂದು ಹಿರಿಯೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಮಹಮದ್ ಜಬಿವುಲ್ಲಾ ತಿಳಿಸಿದ್ದಾರೆ.