ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
IISc, IIT  
ಮತ್ತು NIT  ಸಂಸ್ಥೆಗಳ ಮೂಲಕ Artificial intelligence and machine learing ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ, ತರಬೇತಿ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 04 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

- Advertisement - 

ಸರ್ಕಾರದ ಆದೇಶದಂತೆ IISc, IIT  ಮತ್ತು NIT ಸಂಸ್ಥೆಗಳ ಮೂಲಕArtificial intelligence and machine learing ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ರೂ.15,000/-ಗಳ ಶಿಷ್ಯವೇತನ ನೀಡಲಾಗುವುದು.

- Advertisement - 

ಶಿಷ್ಯವೇತನ, ತರಬೇತಿಗಾಗಿ ಅರ್ಜಿ ಸಲ್ಲಿಸುವ ಇಚ್ಚಿಸುವ ಅರ್ಹ  ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇಯಿಂದ ಪಡೆದು ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾಯ ಪ್ರಮಾಣ ಪತ್ರ, ಬಿ./ಬಿ.ಟೆಕ್ ಪದವಿಯ ಅಂಕಪಟ್ಟಿ, ಘಟಿಕೋತ್ಸವ ಪ್ರಮಾಣ ಪತ್ರ ದಾಖಲೆಗಳನ್ನು ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-225427ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

- Advertisement - 

Share This Article
error: Content is protected !!
";