ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
2025-26ನೇ ಸಾಲಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ ಲೇಖನಾ ಸಾಮಗ್ರಿ ಹಾಗೂ ಇತರ ಮೂಲಭೂತ ಸೌಲಭ್ಯ ಮತ್ತು ಉತ್ತಮವಾದ ಶೈಕ್ಷಣಿಕ ಮಾರ್ಗದರ್ಶನ ನೀಡಲಾಗುವುದು. ಈ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಮೀಸಲಾತಿ ನಿಯಮಾನುಸಾರ ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಗುಂಪುಗಳಿಗೆ ನೀಡಲಾಗುವುದು.
ಈ ಸಂಬಂಧ 05 ರಿಂದ 10 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ವೆಬ್ ಸೈಟ್ http://www.sw.kar.nic.in.com/ ನಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಹ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಆಯ್ಕೆಯನ್ನು ಕೌನ್ಸಿಲಿಂಗ್ ಮೂಲಕ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್–2) ರವರ ಕಚೇರಿಯನ್ನು ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.