ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿಗೆ ಹೊಳಲ್ಕೆರೆ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಿಸಿದ ವಿದ್ಯಾರ್ಥಿ ನಿಲಯದ ವಾರ್ಡ್‍ನ್‍ರವರಿಗೆ ಸಲ್ಲಿಸಬಹುದು ಎಂದು ಹೊಳಲ್ಕೆರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್–2) ತಿಳಿಸಿದ್ದಾರೆ.