ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಚಳ್ಳಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಆಧಾರ್ ಕಾರ್ಡ್, ತಂದೆ–ತಾಯಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಎಸ್‍ಎಟಿಎಸ್ ನಂಬರ್, ಮೊಬೈಲ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು. ಕೌನ್ಸಿಲಿಂಗ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುವುದು. ಅರ್ಜಿ ಸಲ್ಲಿಸಿದ ಒಂದು ಪ್ರತಿ ನಿಲಯದ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಚಳ್ಳಕೆರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್–1) ತಿಳಿಸಿದ್ದಾರೆ.