ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪಿಯುಸಿ ಹಾಗೂ ಸಮನಾಂತರ ಕೋರ್ಸ್ ಮತ್ತು
ಪದವಿಮಟ್ಟದ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 02 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿಗಳನ್ನು ಜಾಲತಾಣದ ವಿಳಾಸ https://shp.karnataka.gov.in ನಲ್ಲಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

