ಕ್ರೀಡಾ ಕಿಟ್ ಪಡೆಯಲು ಸಂಘಗಳಿಂದ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಸಹಾಯಕವಾಗುವ ವಾತಾವರಣವನ್ನು ಕಲ್ಪಿಸಲು ಯುವ ಚೈತನ್ಯ ಯೋಜನೆಯಡಿ ಜಿಲ್ಲೆ ಆಯ್ದ 4 ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಲು 2025-26ನೇ ಸಾಲಿನ ಯುವನೀತಿ ಅನುಷ್ಠಾನದ ಯೋಜನೆಯಡಿ ಯುವ ಸಂಘಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಿದೆ.

- Advertisement - 

ಈ ಹಿಂದೆ ಯುವ ಚೈತನ್ಯ ಯೋಜನೆಯಡಿ ಕ್ರೀಡಾ ಸಾಮಗ್ರ ಪಡೆಯದೇ ಇರುವ ಜಿಲ್ಲೆಯ ಯುವ ಸಂಘಗಳು ಅಗತ್ಯ ದಾಖಲೆಗಳೊಂದಿಗೆ ಜು. 30 ರೊಳಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಇವರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement - 

 

- Advertisement - 
Share This Article
error: Content is protected !!
";