ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಒಂದು ವರ್ಷದ ಟೂಲ್ ರೂಮ್ ಮ್ಯಾಕನಿಸ್ಟ್ ಕೋರ್ಸ್‍ಗೆ ನೇರ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪೂರೈಸಿದ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಕುಂಚಿಗನಾಳ್‍ನ ಕಣಿವೆ ಮಾರಮ್ಮ ದೇವಸ್ಥಾನ ಹತ್ತಿರ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಬಹುದು.
ಮೊಬೈಲ್ ಸಂಖ್ಯೆ 9738465834, 9481866855, 8660270535 ಕರೆ ಮಾಡಬಹುದು ಎಂದು ಪ್ರಾಂಶುಪಾಲ ಸುಹಾಸ್ ತಿಳಿಸಿದ್ದಾರೆ.

