ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
‘ಬೇಲಿಯೇ ಎದ್ದು ಹೊಲ ಮೇಯ್ದ‘ ಉದಾಹರಣೆ ಉಲ್ಲೇಖಿಸಲು ಭವಿಷ್ಯತ್ತಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮೊದಲನೆಯ ಸ್ಥಾನದಲ್ಲಿ ನಿಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಈ ಹಗರಣ ಬೆಳಕಿಗೆ ಬರುತ್ತಿದ್ದಂತೆ ಸಾಕ್ಷ್ಯಾಧಾರಗಳ ನಾಶಪಡಿಸಿರುವ ಷಡ್ಯಂತ್ರಗಳು ನಡೆದಿರುವುದು ಬೆಳಕಿಗೆ ಬರುತ್ತಿದೆ.
ಕರ್ನಾಟಕ ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾದಂತೆ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಚುನಾವಣೆಗೆ ಇನ್ಯಾವುದಾದರೂ ಭ್ರಷ್ಟಾಚಾರ ನಡೆಸಲು ಈ ಸರ್ಕಾರ ಚಿಂತಿಸುತ್ತಿದೆಯೋ ಎಂಬ ಅನುಮಾನ ಹುಟ್ಟುಹಾಕಿದೆ.
ಪರಿಶಿಷ್ಟರ ಕಲ್ಯಾಣಕ್ಕೆಂದೇ ಮೀಸಲಿದ್ದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ ಸಂಪೂರ್ಣ ಹಣವನ್ನು ಮತ್ತೆ ಸರ್ಕಾರದ ಬೊಕ್ಕಸ ಸೇರಿ ಪರಿಶಿಷ್ಟ ವರ್ಗಗಳ ಫಲಾನುಭವಿಗಳಿಗೆ ತಲುಪುವವರೆಗೂ ಕರ್ನಾಟಕ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ.