ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಬ್ಬ ಶಾಸಕನನ್ನೇ ಕೊಲೆ ಮಾಡಲು ಯತ್ನಿಸುತ್ತಿದೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ!? ಎಂದು ಬಿಜೆಪಿ ಪ್ರಶ್ನಿಸಿದೆ.
ಬಂಧಿತನಾದ ಶಾಸಕರನ್ನು ಒಂದು ಪೊಲೀಸ್ ಠಾಣೆಯಿಂದ ಮತ್ತೊಂದು ಪೊಲೀಸ್ ಠಾಣೆಗೆ ಅಕ್ರಮವಾಗಿ ಕರೆದುಕೊಂಡು ಹೋಗಿ ದಾರಿ ಮಧ್ಯೆ ಎನ್‌ಕೌಂಟರ್‌ಮಾಡಲು ಯೋಜನೆ ರಾಜ್ಯ ಸರ್ಕಾರ ರೂಪಿಸಿತ್ತೇ ಎನ್ನುವ ಅನುಮಾನ ಕಾಡುತ್ತಿದೆ ಎಂದು ಬಿಜೆಪಿ ಅನುಮಾನ ವ್ಯಕ್ತಪಡಿಸಿದೆ.
ದೆಹಲಿಯಲ್ಲಿ ವಿಪಕ್ಷ ನಾಯಕ ಬಿಜೆಪಿ ಸಂಸದರಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್ ಸದಸ್ಯರು ಮತ್ತು ಮಾಜಿ ಸಚಿವರಾದ ಸಿಟಿ ರವಿ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಪೊಲೀಸ್ ಇಲಾಖೆಯ ಮೂಲಕ ಮರ್ಡರ್ ಮಾಡಿಸಲು ಪ್ರಯತ್ನ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ಆರೋಪಿಸಿದೆ.
ಒಬ್ಬ ಮಾಜಿ ಸಚಿವ, ಹಾಲಿ ಪರಿಷತ್ ಸದಸ್ಯರ ಮೇಲೆರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.