ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ನಂಬಿಸಿ ಮೋಸ ಮಾಡುವುದೇ ಖಯಾಲಿಯಾಗಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಅತಿವೃಷ್ಟಿ, ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಬುರಗಿ ಸೇರಿದಂತೆ ರಾಜ್ಯಾದ್ಯಂತ ರೈತರಿಗೆ ಬೆಳೆ ವಿಮೆ ಪರಿಹಾರವನ್ನು ಸಮರ್ಪಕವಾಗಿ ಕೊಡದೆ ಸಿದ್ದರಾಮಯ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ.
ಸಂಪೂರ್ಣ ಬೆಳೆ ಹಾನಿಯಾಗಿದ್ದರೂ ಕಡಿಮೆ ಪ್ರಮಾಣದ ಹಾನಿ ತೋರಿಸಿ ಪರಿಹಾರ ಮೊತ್ತಕ್ಕೆ ಕತ್ತರಿ ಹಾಕಿದೆ ದಿವಾಳಿ ಕಾಂಗ್ರೆಸ್‌ಸರ್ಕಾರ. ಘೋಷಿಸಿದಂತೆ ರೈತರ ಖಾತೆಗಳಿಗೆ ಪೂರ್ಣಪ್ರಮಾಣದಲ್ಲಿ ಪರಿಹಾರ ಜಮೆ ಮಾಡದೆ ಅನ್ನದಾತರಿಗೆ ದ್ರೋಹ ಬಗೆದಿದೆ ಎಂದು ಜೆಡಿಎಸ್ ಕಿಡಿಕಾರಿದೆ.

