ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜರ್ಮನಿ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್ ಅವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸದೇ ಸಂಪುಟದ ಸಚಿವರನ್ನು ಕಳಿಸಿರುವುದು ಕೇವಲ ಶಿಷ್ಟಾಚಾರದ ಲೋಪವಲ್ಲ, ಬದಲಾಗಿ ರಾಜ್ಯದ ಹಿತಾಸಕ್ತಿಗೆ ಮಾಡಿದ ದ್ರೋಹ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ನಮ್ಮ ರಾಜ್ಯದ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ವೃದ್ಧಿಸಿಕೊಳ್ಳಲು ಸಿಕ್ಕಿರುವ ಒಂದು ಸುವರ್ಣ ಅವಕಾಶ ಎಂದು ಯಾವುದೇ ರಾಜ್ಯದ ಮುಖ್ಯಮಂತ್ರಿಗಳು ಈ ಜಾಗತಿಕ ನಾಯಕರ ಭೇಟಿಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರು ಸೋಲಿನ ಸರದಾರ ರಾಹುಲ್ ಗಾಂಧಿ ಸ್ವಾಗತಕ್ಕೆ ತೆರಳಿದ್ದು ನಮ್ಮ ರಾಜ್ಯದ ದುರಂತ ಎಂದು ಅಶೋಕ್ ಹರಿಹಾಯ್ದಿದ್ದಾರೆ.

