ಚಂದ್ರವಳ್ಳಿ ನ್ಯೂಸ್, ಮೈಸೂರು:
ರಾಜ್ಯದಲ್ಲಿ ಹಿಂದೆ ಮುಖ್ಯಮಂತ್ರಿಗಳಾಗಿದ್ದ ವೀರೇಂದ್ರ ಪಾಟೀಲ್ ಮತ್ತು ದೇವರಾಜ ಅರಸು ಅವರ ಹಾದಿಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತುಳಿಯುತ್ತಿದ್ದಾರೆಯೇ ಎಂದು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲು ಆಗಮಿಸಿದ ಶ್ರೀರಾಮುಲು ಅವರನ್ನು ಕೇಳಿದಾಗ,
ಬೇರೆ ಪಕ್ಷಗಳ ಆಂತರಿಕ ವಿಷಯದಲ್ಲಿ ಮಾತಾಡಲ್ಲ ಎಂದು ಹೇಳಿದರೂ ಸಹಾ ಕರ್ನಾಟಕದಲ್ಲಿ ಏಕನಾಥ ಶಿಂಧೆ ಅವರಂಥ ಎಪಿಸೋಡ್ ನಡೆದರೆ ಆಶ್ಚರ್ಯಪಡಬೇಕಿಲ್ಲ ಎಂದು ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರತಿನಿಧಿಗಳು ರಾಜ್ಯದ ಅಭಿವೃದ್ಧಿ ಬದಿಗೊತ್ತಿ ಕೇವಲ ಸ್ವಾರ್ಥಕ್ಕೋಸ್ಕರ ರಾಜಕಾರಣ ಮಾಡುತ್ತಿದ್ದಾರೆ ಎಂದು ಶ್ರೀರಾಮುಲು ಆರೋಪಿಸಿದರು.