ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವ ಸಮಿತಿ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾಡಿನ ಜನತೆಗೆ ಬಸವ ಜಯಂತಿಯ ಶುಭಾಶಯಗಳು. ಬಸವಣ್ಣರಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗನ ಹಾಗೂ ಭಾರತೀಯನ ಕರ್ತವ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ಸಿಎಂ ಅಭಿಪ್ರಾಯಪಟ್ಟರು.