ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ನಾನು-ಡಿಕೆಶಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್​ ಪಕ್ಷದ ಯಾವುದೇ ನಾಯಕರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಭಾನುವಾರ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿರುವ ಕುರಿತ ಪ್ರಶ್ನೆಗೆ, ಅವರಿಗೆ ಸಿಎಂ ಆಪ್ತರೇನು?. ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ?. ನಾನು ಸಿಎಂ ಆಪ್ತರಲ್ಲವೇ? ಎಂದು ಡಿಕೆ ಶಿವಕುಮಾರ್ ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು.

- Advertisement - 

ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್​ನವನು. ಎಸ್​.ಎಂ ಕೃಷ್ಣ ಅವರ ಅವಧಿಯಲ್ಲಿ ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ನಾನು. ಹೋಗಿ ಬೇಕಾದರೆ ಅವರನ್ನೇ ಕೇಳಿ?. ಸಿಎಂಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

ಸಿಎಂ ಆಪ್ತ, ಮಾಜಿ ಸಚಿವ ಕೆ.ಎನ್​.ರಾಜಣ್ಣ ಭೇಟಿ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ನಾವು ಸಹೋದ್ಯೋಗಿಗಳು, ಅವರು ನಮ್ಮೊಂದಿಗೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ. ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳು, ವಿರೋಧ ಪಕ್ಷಗಳು ಸೃಷ್ಟಿಸುತ್ತಿವೆ. ಅವರು ತಮಗೆ ಬೇಕಾದ ಆಹಾರ ಸೃಷ್ಟಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ರಾಜಕೀಯವಾಗಿ ಹೇಳಿಕೆ ಕೊಟ್ಟಿರುತ್ತಾರೆ. ಇದಕ್ಕೆ ಬೇಸರ ಮಾಡಿಕೊಳ್ಳಲು ಆಗುತ್ತದೆಯೇ?. ಅಣ್ಣ ತಮ್ಮಂದಿರೇ ಜಗಳ ಮಾಡುತ್ತಾರಂತೆ, ಇನ್ನು ನಮ್ಮದು ಯಾವ ಜಗಳ? ಎಂದು ಶಿವಕುಮಾರ್ ತಿಳಿಸಿದರು.

- Advertisement - 

ಎಲ್ಲ ಕಾಂಗ್ರೆಸ್​​​ ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ನನ್ನ ಸ್ನೇಹಿತರು, ಸಹೋದ್ಯೋಗಿಗಳು, ಒಟ್ಟಿಗಿದ್ದೇವೆ. ನಾನಂತೂ ಯಾರ ಮೇಲೂ ಜಗಳ ಮಾಡಲು ಹೋಗಿಲ್ಲ. ಯಾವ ವಿಚಾರಕ್ಕೂ ಒಬ್ಬರ ಮೇಲೆ ಇನ್ನೊಬ್ಬರು ಇದುವರೆಗೂ ಹೇಳಿಕೆ ನೀಡಿಲ್ಲ. ದಾಖಲೆಗಳನ್ನು ತೆಗೆದು ನೋಡಿ. ವಿರೋಧ ಪಕ್ಷದವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಿದ್ದೇನೆಯೇ ಹೊರತು, ನಾನಾಗಿಯೇ ಯಾರ ಮೇಲೂ ಹೇಳಿಕೆ ನೀಡಿಲ್ಲ. ನಾನಾಗಿಯೇ ಒಬ್ಬರ ಮೇಲಾದರೂ ಹೇಳಿಕೆ ನೀಡಿದ್ದರೆ ತಿಳಿಸಿ ಎಂದು ಡಿಸಿಎಂ ಮರು ಪ್ರಶ್ನಿಸಿದರು.

ರಾಜಣ್ಣ ನಮ್ಮ ಶಾಸಕರು. ನಮ್ಮ ಜತೆ ಮಂತ್ರಿಯಾಗಿದ್ದವರು. ಸೌಹಾರ್ದಯುತ ಭೇಟಿ ಮಾಡುತ್ತೇವೆ. ಶನಿವಾರ ಸರಿಯಾಗಿ ಮಾತನಾಡಲು ಆಗಲಿಲ್ಲ. ಅದಕ್ಕೆ ಭಾನುವಾರವೂ ಭೇಟಿ ಮಾಡುತ್ತೇನೆ ಎಂದು ಹೇಳಿದ್ದೇನೆ. ರಾಜ್ಯಪಾಲರ ಕಾರ್ಯಕ್ರಮ ಇರುವ ಕಾರಣಕ್ಕೆ ಆ ನಂತರ ಭೇಟಿ ಮಾಡುತ್ತೇನೆ ಎಂದರು.

ಪಕ್ಷದಲ್ಲಿ ಗೊಂದವಿಲ್ಲ:
ಬಿ.ಆರ್.ಸುದರ್ಶನ್ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ‌ಬರೆದು ಎಲ್ಲ ಗೊಂದಲಗಳನ್ನು ಬಗೆಹರಿಸಿ ಎಂದಿರುವ ಬಗ್ಗೆ ಕೇಳಿದಾಗ
, ನನ್ನ ಪ್ರಕಾರ ಯಾವ ಗೊಂದಲವೂ ಇಲ್ಲ. ಗೊಂದಲ ಎಲ್ಲಿದೆ. ಗೊಂದಲ ಮಾಧ್ಯಮ‌ಹಾಗೂ ಬಿಜೆಪಿ ಸೃಷ್ಟಿ. ಅವರ ಪಕ್ಷದಲ್ಲಿ ಸಾಕಷ್ಟು ತೊಂದರೆಗಳಿವೆ ಅದಕ್ಕೆ ‌ಮಾಡುತ್ತಿದ್ದಾರೆ. ಮಾಧ್ಯಮಗಳಿಗೂ ಸುದ್ದಿ ಬೇಕು. ಅದಕ್ಕೆ ದಿನಾ ತೋರಿಸುತ್ತಿದ್ದೀರಿ ಅಷ್ಟೇ ಎಂದು ಡಿಕೆ ಶಿವಕುಮಾರ್ ಟೀಕಾಪ್ರಹಾರ ಮಾಡಿದರು.

ಇತ್ತೀಚೆಗೆ ಹೆಚ್ಚು ಆತ್ಮವಿಶ್ವಾಸದಲ್ಲಿರುವಂತೆ ಕಾಣುತ್ತಿರಲ್ಲ ಎಂದು ಕೇಳಿದಾಗ, ನೀವೇ ನನಗೆ ಆತ್ಮವಿಶ್ವಾಸ. ಅನವಶ್ಯಕ ಪ್ರಚಾರ ನೀಡುತ್ತಿದ್ದೀರಿ. ಜನರ ಆಶೀರ್ವಾದವೇ ನನಗೆ ಆತ್ಮವಿಶ್ವಾಸ. ಈಗ ತಾನೇ ಹೈಕಮಾಂಡ್ ನಾಯಕರ ಜತೆ ಮಾತನಾಡಿದೆ. ಪರಿಷತ್ ಚುನಾವಣೆ ವಿಚಾರವಾಗಿ ನಾಲ್ಕು ಜನಕ್ಕೆ ಬಿ ಫಾರಂ ನೀಡುವ ವಿಚಾರ ಚರ್ಚೆ ನಡೆಸಿದೆ. ಹೆಸರನ್ನು ಘೋಷಿಸಿ ಎಂದು ಚರ್ಚೆ ನಡೆಸಿದೆ ಎಂದು ಡಿಸಿಎಂ ತಿಳಿಸಿದರು.

ದೆಹಲಿ ಪ್ರವಾಸ ಏಕೆ?:
ದೆಹಲಿ ಪ್ರವಾಸ ಏಕೆ ಎಂದು ಮಾಧ್ಯಮದರು ಕೇಳಿದ ಪ್ರಶ್ನಿಗೆ ಉತ್ತರಿಸಿದ ಅವರು ನದಿ ಜೋಡಣೆ ವಿಚಾರವಾಗಿ ಸಭೆ ಇರುವ ಕಾರಣಕ್ಕೆ ತೆರಳುತ್ತಿದ್ದೇನೆ. ಇದೇ ವೇಳೆ ನಗರಾಭಿವೃದ್ಧಿ ಸಚಿವರ ಭೇಟಿಗೆ ಅವಕಾಶ ಕೇಳಿದ್ದೇನೆ. ಮೆಟ್ರೋ ಸೇರಿದಂತೆ ಇತರೆ ಕೆಲಸಗಳಿಗೆ ಶೇ.
50ರಷ್ಟು ಅನುದಾನ ನೀಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಡಿಸಿಎಂ ತಿಳಿಸಿದರು.

ಕೇಂದ್ರ ಸರ್ಕಾರ ಕೇವಲ ಶೇ.12-13ರಷ್ಟು ಅನುದಾನ ನೀಡಿದರೆ ಸಾಲುವುದಿಲ್ಲ. ಮೆಟ್ರೋ ಅಡಿ ದೊಡ್ಡ ಯೋಜನೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ನಿಗದಿತ ಅವಧಿಯೊಳಗೆ ಮುಗಿಸಬೇಕಲ್ಲವೇ? ಡಬ್ಬಲ್ ಡೆಕ್ಕರ್ ಕೂಡ ಮಾಡುತ್ತಿದ್ದೇವೆ. ಹೊಸ ಮಾರ್ಗಗಳನ್ನು ವಿಸ್ತರಿಸಬೇಕಲ್ಲವೇ. ಹೊಸಕೋಟೆ, ಬಿಡದಿ ಮಾರ್ಗಗಳ ಬಗ್ಗೆ ಚರ್ಚಿಸಬೇಕಿದೆ ಎಂದರು.

ಮಹದಾಯಿ, ಎತ್ತಿನಹೊಳೆ ವಿಚಾರವಾಗಿ ಅರಣ್ಯ ಸಚಿವರ ಬಳಿ ಮಾತನಾಡಬೇಕಿದೆ. ಎತ್ತಿನಹೊಳೆಯ ಹೆಚ್ಚಿನ ಕೆಲಸ ಮುಗಿಸಿದ್ದೇವೆ. ತುಮಕೂರಿನವರೆಗೆ ನೀರು ತರಲಿಲ್ಲ ಎಂದರೆ ಜನ ಹೊಡೆಯುತ್ತಾರೆ. ಮೇಕೆದಾಟು ವಿಚಾರವಾಗಿ ಡಿಪಿಆರ್ ವರದಿ ಸಲ್ಲಿಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Share This Article
error: Content is protected !!
";