ಜಗಜೀವನ ರಾಂ ಅವರ ಆಡಳಿತ ವೈಖರಿ ನಮಗೆ ಸ್ಫೂರ್ತಿದಾಯಕ –ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರು ಉತ್ತಮ ಆಡಳಿತಗಾರರಾಗಿದ್ದರು. ಅವರ ಆಡಳಿತÀ ವೈಖರಿಯು ನಮಗೆ ಸ್ಫೂರ್ತಿದಾಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

- Advertisement - 

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಾನುವಾರ ಆಯೋಜಿಸಿದ್ದ ಡಾ. ಬಾಬು ಜಗಜೀವನ ರಾಂ ಅವರ 39ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಡಾ.ಬಾಬು ಜಗಜೀವನ ರಾಂ ಅವರು ಸ್ವಾತಂತ್ರ ಹೋರಾಟಗಾರರಲ್ಲದೆ ಸಮಾಜ ಸೇವಕರು ಆಗಿದ್ದರು. ನಾಡು ಕಂಡ ಅಪರೂಪದ ನಾಯಕ. ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದರು. ಅವರು ನಮಗೆಲ್ಲರಿಗೂ ಮಾರ್ಗದರ್ಶರಕರಾಗಿದ್ದಾರೆ. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ತಿಳಿಸಿದರು.

- Advertisement - 

ದೀನದಲಿತರು, ಹಿಂದುಳಿದವರು, ಕಾರ್ಮಿಕರು, ಅಲ್ಪಸಂಖ್ಯಾತರಿಗೆ ನಾಯಕರಾಗಿದ್ದರು. ಮಾನವೀಯ ಮೌಲ್ಯ ಹೊಂದಿದ್ದ ಅವರು  ಸಮಾಜ ಸುಧಾರಕರಾಗಿದ್ದರು.  ಉತ್ತಮ ಆಡಳಿತಗಾರರಾಗಿದ್ದರಲ್ಲದೆ ಎಲ್ಲರಿಗೂ ಆದರ್ಶಪ್ರಾಯವಾಗಿದ್ದರು ಎಂದು ತಿಳಿಸಿದರು.

ದೇಶದ ಹಸಿರು ಕ್ರಾಂತಿಯ ಹರಿಕಾರರಾಗಿ  ದೇಶದಲ್ಲಿ ಆಹಾರ ಸ್ವಾವಲಂಬನೆಯನ್ನು  ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕೃಷಿಯನ್ನು ಆಧುನೀಕರಿಸಲು ಅವರು ನೀಡಿದ ಕೊಡುಗೆ ಅಪಾರ ಎಂದು ತಿಳಿಸಿದರು.

- Advertisement - 

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ, ನಗರಾಭಿವೃದ್ಧಿ ಮತ್ತು  ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್,  ಸಮಾಜ ಕಲ್ಯಾಣ ಇಲಾಖೆಯ  ಮಾಜಿ ಸಚಿವ ಹೆಚ್. ಆಂಜನೇಯ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ. ರಾಕೇಶ್ ಕುಮಾರ್ ಸೇರಿದಂತೆ ಹಿರಿಯ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು. 

 

 

Share This Article
error: Content is protected !!
";