ಜನವರಿ-21ಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದರು.

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆ ಮುಂದೂಡಲಾಗಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಜನವರಿ 21ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಎಐಸಿಸಿ ವತಿಯಿಂದ ನಡೆಯಲಿರುವ ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇವೆ. ಈ ಸಮಾವೇಶದ ಮೂಲಕ “ಗಾಂಧಿ ಭಾರತ” ಕಾರ್ಯಕ್ರಮವನ್ನು ಮುಂದುವರೆಸುವಂತಹ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರು ಬರುವ ಬಗ್ಗೆ ನಾವು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಅವರು ತಿಳಿಸಿದರು.

ಜನವರಿ 13 ರಂದು ಈ ಕುರಿತು ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ  ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಕೆಪಿಸಿಸಿ ಸದಸ್ಯರು, ಶಾಸಕರು, ಸಚಿವರು, ಬ್ಲಾಕ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಎಲ್ಲರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.

 ಇದರ ಜೊತೆಗೆ ಪದಾಧಿಕಾರಿಗಳ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಲಿದೆ. ಇದಲ್ಲದೆ ಜನವರಿ 15 ಹಾಗೂ 16 ರಂದು ಸಚಿವರು, ಶಾಸಕರು, ಮುಖಂಡರು, ಮಾಜಿ ಶಾಸಕರು, ಮಾಜಿ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗಾಗಿ ಪೂರ್ವಭಾವಿ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದರು.  

ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮದಡಿ ನಡೆಯುವ ಸಮಾವೇಶದಲ್ಲಿ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಚಾರಿತ್ರಿಕ ಹಿನ್ನೆಲೆಯುಳ್ಳ ಪುಸ್ತಕವನ್ನು ಕೆಪಿಸಿಸಿ ವತಿಯಿಂದ ಬಿಡುಗಡೆ ಮಾಡಲಾಗುತ್ತದೆ. ಈ ಸಮಾವೇಶಕ್ಕೆ ಪಕ್ಷದ ಎಲ್ಲರೂ ಭಾಗಿಯಾಗಲಿದ್ದು, ಗಾಂಧೀಜಿ ಅವರ ತತ್ವಗಳನ್ನು ಉಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

 

 

- Advertisement -  - Advertisement - 
Share This Article
error: Content is protected !!
";