ಜನಾರ್ದನರೆಡ್ಡಿ ಅವರ ಅಕ್ರಮ ಗಣಿಗಾರಿಕೆ ಸಾಬೀತು, 884 ಕೋಟಿ ವಸೂಲಿಗೆ ಪತ್ರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟ ಮಾಡಿದ್ದಾರೆ. ಹೀಗಾಗಿ ಆ ಹಣವನ್ನು ಅವರಿಂದ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು.

- Advertisement - 

ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ ರೆಡ್ಡಿ ನಡೆಸಿರುವ ಗಣಿಗಾರಿಕೆ ಕುರಿತು ವರದಿ ನೀಡಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

- Advertisement - 

 

Share This Article
error: Content is protected !!
";