ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಸೆದ ಬೌಲಿ​​​​ಗೆ ಜಾರಕಿಹೊಳಿ ಕ್ಲೀನ್ ಬೋಲ್ಡ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಳಗಾವಿಯ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆಯನ್ನ ಶುಕ್ರವಾರ ಸಚಿವರಿಬ್ಬರು ನೆರವೇರಿಸಿದರು. ಕ್ರಿಕೆಟ್ ಮೈದಾನದ ಉದ್ಘಾಟನೆಯ ಅಂಗವಾಗಿ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್‌ಗೆ ಇಳಿದರು. ಇದೇ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ ಬೌಲಿಂಗ್​​​​ಗೆ ಸತೀಶ್ ಜಾರಕಿಹೊಳಿ ಕ್ಲೀನ್ ಬೋಲ್ಡ್ಆಗಿದ್ದಾರೆ. ಇದನ್ನು ಕಂಡ ನೆರೆದಿದ್ದ ಕಾರ್ಯಕರ್ತರು ಮತ್ತು ಜನರು ಶಿಳ್ಳೆ, ಚಪ್ಪಾಳೆ ತಟ್ಟಿ ಸ್ವಾಗತಿಸಿದರು.

ರಾಜಕೀಯದ ಕಡು ವೈರಿಗಳು, ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ ಪ್ರಭಾವಿ ಕಾಂಗ್ರೆಸ್ ನಾಯಕರು ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ.

- Advertisement - 

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ ಬಾಕ್ಸ್ ಕ್ರಿಕೆಟ್’  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.

 

- Advertisement - 

Share This Article
error: Content is protected !!
";