ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಸಂಸತ್ ಭವನದ ಕಚೇರಿಯಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಚರ್ಚಿಸಿದರು.
ರಾಜ್ಯದ ಅಭಿವೃದ್ಧಿ ವಿಷಯಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು ಹಾಗೂ ಕರ್ನಾಟಕ ಭವನ 1 (ಕಾವೇರಿ) ನೂತನ ಕಟ್ಟಡ ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವಂತೆ ಜಯಚಂದ್ರ ಅವರು ಆಹ್ವಾನ ನೀಡಿದರು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.