ಗಿಡ ನೆಟ್ಟು ಪೋಷಿಸುವ ಹೊಣೆ ಹೊತ್ತ ಜೆಡಿಎಸ್ ಕಾರ್ಯಕರ್ತರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡವನ್ನು ನೆಡೋಣ, ಮರವಾಗಿ ಬೆಳೆಸೋಣ ಎಂಬ ಶೀರ್ಷಿಕೆ ಅಡಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜೆಡಿಎಸ್ ಘಟಕದಿಂದ ಸಸಿಗಳನ್ನು ನೆಡುವ ಹಾಗೂ ವಿತರಿಸುವ ಕಾರ್ಯಕ್ರಮವನ್ನು ಬೆಂಗಳೂರು ಜಯನಗರ ಟಿ ಬ್ಲಾಕ್ ನಲ್ಲಿರುವ ಚಾಮುಂಡಿ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

- Advertisement - 

ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ 2500 ಸಸಿಗಳನ್ನು ನೆಟ್ಟು ಅವುಗಳನ್ನು ಆರು ತಿಂಗಳ ಕಾಲ ಪೋಷಿಸುವ ಜವಾಬ್ದಾರಿಯನ್ನು ಪಕ್ಷದ ಕಾರ್ಯಕರ್ತರುಗಳು ವಹಿಸಿಕೊಂಡರು.

- Advertisement - 

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ ಆರ್ ತುಳಸಿರಾಮ್, ಹಿರಿಯ ಮುಖಂಡ ರಾಮಚಂದ್ರಪ್ಪ, ಚಲನಚಿತ್ರ ನಟ ಪ್ರವೀಣ್ ತೇಜ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ  ಅಧ್ಯಕ್ಷ ನಾಗೇಶ್ವರ್ ರಾವ್,

ಬೆಂಗಳೂರು ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಕಾರ್ಮಿಕ ವಿಭಾಗದ ಅಧ್ಯಕ್ಷ ಎಂ ಗೋಪಾಲ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಸಿ.ಎಂ ನಾಗರಾಜ್, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಜನಾರ್ಧನ್, ವಿಧಾನಸಭಾ ಕ್ಷೇತ್ರ ಅಧ್ಯಕ್ಷರುಗಳಾದ ವಿಜಯಕುಮಾರ್ ಕೃಷ್ಣ(ಜಯನಗರ), ಕೆ.ಜೆ ರಮೇಶ್ ( ಬಿಟಿಎಂ ಲೇಔಟ್), ಬಿ.ಎಸ್ ಗಣೇಶ್(ಬೊಮ್ಮನಹಳ್ಳಿ), ಬಿ.ಆರ್ ಪ್ರಕಾಶ್ ಗೌಡ ( ವಿಜಯನಗರ), ಆರ್. ಕುಮಾರ್ (ಚಿಕ್ಕಪೇಟೆ) ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

- Advertisement - 

 

 

Share This Article
error: Content is protected !!
";