ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ಶಾಲಾ ಮಕ್ಕಳ ಮೊಟ್ಟೆ ಹಣವನ್ನು ನುಂಗುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದು ಜೆಡಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದೆ.
ಶಾಲಾ ಮಕ್ಕಳಿಗೆ ವಾರದ 6 ದಿನಗಳು ಮೊಟ್ಟೆ ನೀಡಲು ಅಜೀಂ ಪ್ರೇಮ್‌ಜೀ ಫೌಂಡೇಶನ್1500 ಕೋಟಿ ರೂ. ನೆರವು ನೀಡಿತ್ತು.
ಆದರೆ ಮೊಟ್ಟೆ ಬದಲು ಬಾಳೆಹಣ್ಣು ವಿತರಿಸುತ್ತಿರುವ ಭ್ರಷ್ಟ ಕಾಂಗ್ರೆಸ್‌ಸರ್ಕಾರ, ಶಾಲಾ ಮಕ್ಕಳು ತಿನ್ನುವ ಮೊಟ್ಟೆ ಹಣಕ್ಕೂ ಕನ್ನ ಹಾಕಿದೆ ಎಂದು ಜೆಡಿಎಸ್ ದೂರಿದೆ.
1500 ಕೋಟಿಯಲ್ಲಿ ಯಾರು ಯಾರು ಎಷ್ಟೆಷ್ಟು ಪರ್ಸಂಟೇಜ್‌ಹೊಡೆದಿದ್ದೀರಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ? ಎಂದು ಜೆಡಿಎಸ್ ಪ್ರಶ್ನಿಸಿದೆ.