ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರು ನಗರದ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
ನಂತರ ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಇದೇ ವೇಳೆ ನಿಖಿಲ್ ಅವರನ್ನು ಹರಸಿದರು.
ಇದಾದ ನಂತರ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಪಕ್ಷಗಳ NDA ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮುನ್ನ ಚನ್ನಪಟ್ಟಣದಲ್ಲಿ ಬೃಹತ್‌ರ‍್ಯಾಲಿ ಮಾಡಿ ನಾಮಪತ್ರ ಸಲ್ಲಿಸಿದರು. ಮೆರವಣಿಗೆಯಲ್ಲಿ ಹತ್ತಾರು ಸಾವಿರ ಜೆಡಿಎಸ್-ಬಿಜೆಪಿ ಪಕ್ಷಗಳ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದರಾದ ಡಾ.ಸಿ.ಎನ್.ಮಂಜುನಾಥ್, ರಾಜ್ಯಸಭಾ ಸದಸ್ಯರಾದ ಲೆಹರ್‌ಸಿಂಗ್, ಜೆಡಿಎಸ್‌ಮುಖಂಡರಾದ ಪ್ರಸನ್ನ ಪಿ.ಗೌಡ ಸೇರಿದಂತೆ ಮತ್ತಿತರ ನಾಯಕರು, ಮುಕಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.