ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ಮಳೆ ಹಾನಿಗೊಳಗಾದ ಸಿಲ್ಕ್ ಬೋರ್ಡ್ ಸ್ಥಳಕ್ಕೆ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ಬಾಬು ಸಿ.ಬಿ. ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಶಾಸಕರು ಹಾಗೂ ಮುಖಂಡರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಲಾಯಿತು.
ಬೆಂಗಳೂರಿನ ಜಯನಗರದ ಅರಸು ಕಾಲೋನಿಯಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿ, ಸಂಕಷ್ಟಕ್ಕೊಳಗಾದ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಾಯಿತು.
ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು ಸಿ.ಬಿ. ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕ ಸಿ.ಎನ್. ಬಾಲಕೃಷ್ಣ, ಶಾಸಕ ಜಿ.ಡಿ. ಹರೀಶ್‌ಗೌಡ, ವಿಧಾನ ಪರಿಷತ್‌ಸದಸ್ಯರಾದ ಟಿ.ಎ. ಶರವಣ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.