ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತೆಂಗಿನ ಮರಗಳಿಗೆ ವ್ಯಾಪಿಸಿರುವ ನುಸಿ ರೋಗ (ಬಿಳಿ ಹುಳು) ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಸುರೇಶ್‌ಬಾಬು ಸಿ.ಬಿ. ಅವರು ವಿಧಾನಸಭೆಯಲ್ಲಿ ಗಮನ ಸೆಳೆದಿದ್ದಾರೆ.
ತೆಂಗು ಬೆಳೆಗಾರರ ಪರವಾಗಿ ಧ್ವನಿ ಎತ್ತಿ, ನುಸಿ ರೋಗದಿಂದ ನಷ್ಟಕ್ಕೆ ಒಳಗಾಗಿರುವ ರೈತರಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಅವರು ಆಗ್ರಹಿಸಿದರು.