ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದ 402 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಧರಣಿಗೆ ಜೆಡಿಎಸ್ ಪಕ್ಷ ಬೆಂಬಲ ವ್ಯಕ್ತಪಡಿಸಿದೆ.
ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಅವರು ಬೆಂಗಳೂರಿನ ಫ್ರೀಡಂಪಾರ್ಕ್‌ಗೆ ತೆರಳಿ ಪ್ರತಿಭಟನಾ ನಿರತ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ವಿಳಂಬ ಧೋರಣೆ ಬಿಟ್ಟು ತಕ್ಷಣವೇ ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಬೆಂಗಳೂರು ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಕಾರ್ಮಿಕ ವಿಭಾಗದ ಅಧ್ಯಕ್ಷ ಎಂ.ಗೋಪಾಲ್, ಸೇವಾದಳ ವಿಭಾಗದ ಅಧ್ಯಕ್ಷ ಪಿ.ಮಹೇಶ್, ಯುವ ಮುಖಂಡರಾದ ಚೇತನ್ ಸೂರ್ಯ, ವಿನಯ್ ಹಾಗೂ ಇನ್ನಿತರ ಹಲವರು ಭಾಗವಹಿಸಿದ್ದರು.