ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಸುವರ್ಣಸೌಧದ ಎದುರು ದೇಶಕ್ಕಾಗಿ ಹೋರಾಡಿದ ನಿವೃತ್ತ ಸೈನಿಕರು ತಮಗೆ ಸರ್ಕಾರದಿಂದ ಸಿಗಬೇಕಾದ ಜಮೀನು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ದೇಶಕ್ಕಾಗಿ ದುಡಿದ ಸೈನಿಕರಿಗೆ ಅಗತ್ಯ ಸೌಕರ್ಯ ಕಲ್ಪಿಸಿಕೊಡಬೇಕು ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ಬಾಬು ಸಿ.ಬಿ. ಅವರು ಮನವಿ ಮಾಡಿದರು.
ಮೈಸುನ ಜಿಲ್ಲೆಯ ಬೋಗಾದಿ ಸೇರಿದಂತೆ ಹಲವು ವಸತಿ ಶಾಲೆಗಳಲ್ಲಿ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಮತ್ತು ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ತೊಂದರೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್‌ಸದಸ್ಯರಾದ ಸಿ.ಎನ್.ಮಂಜೇಗೌಡ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತಂದು ಅವುಗಳನ್ನು ನಿವಾರಿಸುವಂತೆ ಮನವಿ ಮಾಡಿದರು.
ವಿಧಾನ ಪರಿಷತ್‌ಸದಸ್ಯರಾದ ಜವರಾಯಿಗೌಡ ಅವರ ಪರವಾಗಿ ಕೆ.ಎ. ತಿಪ್ಪೇಸ್ವಾಮಿ ಅವರು ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳ ಕೊರತೆ ಮತ್ತು ಅಲ್ಲಿನ ಸಮಸ್ಯೆಗಳು ಹಾಗೂ ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಿಸಲು ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಪ್ರಶ್ನೆ ಮಾಡಿದರು ಎಂದು ಜೆಡಿಎಸ್ ತಿಳಿಸಿದೆ.