ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶುಭೋದಯ ಬೆಂಗಳೂರು ! ಎಲ್ಲರಿಗೂ ದೀಪಾವಳಿಯ ಶುಭಾಶಯಗಳು! ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ. 7.5 ಲಕ್ಷ ಮನೆ ಮಾಲೀಕರು 100 ದಿನಗಳಲ್ಲಿ ಲಕ್ಷ ಲಕ್ಷ ಪಾವತಿಸುವಂತೆ ಒತ್ತಾಯಿಸುತ್ತಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದರು.
ಆದರೆ ಚಿಂತಿಸಬೇಡಿ, ಜೆಡಿಎಸ್ ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನಾವು ಪ್ರತಿಭಟನೆ ಮೂಲಕ ಮತ್ತು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ನಿಮ್ಮ ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಈ ಬಗ್ಗೆ ಗುರುವಾರ ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುವುದಾಗಿ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ!.

