ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿಕ್ಕಬಳ್ಳಾಪುರ, ಗೌರಿಬಿದನೂರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಗಳ ಸಾಮಾಜಿಕ ಜಾಲತಾಣ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಮುಂದಿನ 2028ರ ಚುನಾವಣೆಗೆ ಪಕ್ಷವನ್ನು ಸಂಘಟಿಸಲು ಹಾಗೂ ಪಕ್ಷದ ವಿಚಾರಗಳು ಜನರನ್ನು ತಲುಪಲು ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ, ಪರಿಣಾಮಕಾರಿಯಾಗಿ ಬಳಸುವ ಕುರಿತಂತೆ ಮನವರಿಕೆ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಚಂದನ್ ಹೆಚ್.ಎಸ್, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಬಿ. ಮುನಿಯಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಸೈಯದ್ ರೋಷನ್ ಅಬ್ಬಾಸ್, ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಮುಖಂಡ ನರಸಿಂಹ ಮೂರ್ತಿ, ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಪ್ರಭಾ ನಾರಾಯಣಗೌಡ, ಕಾರ್ಯಾಧ್ಯಕ್ಷ ವಿಜಯ್ ಕುಮಾರ್ ಮತ್ತು ತಾಲ್ಲೂಕು ಮುಖಂಡರು ಹಾಗೂ ಸಾಮಾಜಿಕ ಜಾಲತಾಣದ ಪದಾಧಿಕಾರಿಗಳು ಉಪಸ್ಥಿತರಿದ್ದರು.

