ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಪಕ್ಷದ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನಕ್ಕೆ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಮುಂಬರುವ ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಸಮರೋಪಾದಿಯಲ್ಲಿ ಬೂತ್ ಮಟ್ಟದಿಂದ ರಚನಾತ್ಮಕವಾಗಿ ಸಂಘಟಿತರಾಗಬೇಕು ಎಂದು ರಮೇಶ್ ಗೌಡ ಕರೆ ನೀಡಿದರು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ವಿಭಾಗದ ಜಿಲ್ಲಾ ಉಸ್ತುವಾರಿಗಳಾದ ನಿಸರ್ಗ ನಾರಾಯಣಸ್ವಾಮಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್. ಚಂದ್ರು, ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಎಂ. ಗೋಪಾಲ್, ಬೆಂಗಳೂರು ನಗರದ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ನಾಗರಾಜಯ್ಯ ಸೇರಿದಂತೆ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.