ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಚಾಲನೆ ನೀಡಿದ ಜೆಡಿಎಸ್

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಕೊರಟಗೆರೆ:
ಜೆಡಿಎಸ್ ಪಕ್ಷದ ವತಿಯಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ( ಎಸ್ಐಆರ್
)ಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟ್( ಬಿಎಲ್ಎ)ಗಳ ಕಾರ್ಯಾಗಾರ ನಡೆಸಿದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುಧಾಕರ್ ಲಾಲ್ ಅವರಿಗೆ, ಜಿಲ್ಲಾಧ್ಯಕ್ಷ ಎಚ್. ನಿಂಗಪ್ಪ ಅವರಿಗೆ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ  ಮುದಿಮಡು ರಂಗಶಾಮಯ್ಯ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ ಪಕ್ಷದ ಮುಖಂಡರಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅವರು ಅರ್ಪಿಸಿದ್ದಾರೆ.

- Advertisement - 

ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯಾಗಾರವನ್ನು ಶೀಘ್ರವಾಗಿ ನಡೆಸುವಂತೆ ಆಯಾಯ ಕ್ಷೇತ್ರಗಳ ಮುಖಂಡರಲ್ಲಿ ನಿಖಿಲ್ ಅವರು ಕೋರಿದರು.

 

- Advertisement - 

 

 

Share This Article
error: Content is protected !!
";