ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಪ್ರತಿಭಟಿಸಿದ ಜೆಡಿಎಸ್ ಮುಖಂಡರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರನ್ನು ಗುಂಡಿಯೂರು ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ಸದಸ್ಯರಾದ ಟಿ.ಎ. ಶರವಣ ಅವರ ನೇತೃತ್ವದಲ್ಲಿ ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಗೋವಿಂದರಾಜ ನಗರದ ಪೇಟೆ ಚೆನ್ನಪ್ಪ ಕೈಗಾರಿಕಾ ಪ್ರದೇಶದ ಮಾಗಡಿ ಮುಖ್ಯ ರಸ್ತೆಯಲ್ಲಿ ಯಮ ಗುಂಡಿಗಳಿಗೆ ಮೂವರು ಅಮಾಯಕರು ಬಲಿಯಾಗಿದ್ದರು. ಆ ಸ್ಥಳದಲ್ಲಿ ಕಾಂಕ್ರೀಟ್ ಮಿಶ್ರಣ ಬಳಸಿ ಗುಂಡಿಗಳನ್ನು ಮುಚ್ಚುವ ಮೂಲಕ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷವನ್ನು ಖಂಡಿಸಲಾಯಿತು.

- Advertisement - 

ಕಾಂಗ್ರೆಸ್‌ಆಡಳಿತದಲ್ಲಿ ಜನರ ಪ್ರಾಣಕ್ಕೆ ಗ್ಯಾರಂಟಿ ಇಲ್ಲವಾಗಿದೆ, ದೇಶದಲ್ಲಿ “ಕಾಂಗ್ರೆಸ್ ಗಿಡಗಳು” ಪ್ರಕೃತಿಗೆ ಹೇಗೆ ಮಾರಕವಾಗಿವೆಯೋ, ಹಾಗೆಯೇ ಕಾಂಗ್ರೆಸ್ ಸರ್ಕಾರ ಬೆಂಗಳೂರಿಗರಿಗೆ ಅತ್ಯಂತ ಅಪಾಯಕಾರಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

 

- Advertisement - 

Share This Article
error: Content is protected !!
";